ಕೊಡಗು ಜಿಲ್ಲಾ ಯುವ ಕಾಂಗ್ರೇಸ್ ನಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮ ದಿನಾಚರಣೆ.
ಮಡಿಕೇರಿ ಆ.20 : ದೇಶದ ಯುವ ಸಮೂಹಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುವ ಶಕ್ತಿ ತುಂಬಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಆದರ್ಶಗಳು ಇಂದಿಗೂ ಜೀವಂತವೆಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಎಸ್.ಪಿ ಹೇಳಿದ್ದಾರೆ.
ನಗರದಲ್ಲಿ ಯುವ ಕಾಂಗ್ರೆಸ್ ವತಿಯಿಂದ ನಡೆದ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶವನ್ನು ತಾಂತ್ರಿಕವಾಗಿ ಉನ್ನತ ಮಟ್ಟಕ್ಕೇರಿಸಿದ ದೂರದೃಷ್ಟಿತ್ವದ ನಾಯಕ ರಾಜೀವ್ ಗಾಂಧಿ ಅವರು ಇಂದಿನ ಯುವ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ. ದೀನ, ದಲಿತರ, ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಶ್ರಮಿಸಿದ ದೇವರಾಜ ಅರಸು ಅವರ ಸೇವೆ ಸ್ಮರಣೀಯವೆಂದು ಹನೀಫ್ ಬಣ್ಣಿಸಿದರು.